ನೀವು ಯಾವ ಕೆಲಸವನ್ನು ಮಾಡಿದರೋ ಅದನ್ನು ಮನುಷ್ಯರಿಗೋಸ್ಕರವೆಂದು ಮಾಡದೇ ಕರ್ತನಿಗೋಸ್ಕರವೇ ಎಂದು ಮನಃಪೂರ್ವಕವಾಗಿ ಮಾಡಿರಿ.
ಕೊಲೊ 3.23-
ನನ್ನ ಸಹೋದರರೇ,ಒಬ್ಬನು ತನಗೆ ನಂಬಿಕೆಯುಂಟೆಂದು ಹೇಳಿಕೊಂಡು ತಕ್ಕ ಕ್ರಿಯೆಗಳಿಲ್ಲದವನಾಗಿದ್ದರೆ ಪ್ರಯೋಜನವೇನು ?
-
"ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು
ನಿಮ್ಮೆಲ್ಲರೊಂದಿಗಿರಲಿ. ಆಮೆನ್."
- ಫಿಲಿಪ್ಪಿ 4:23-
ಕರ್ತನ ಮುಂದೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ; ಆಗ ಆತನು ನಿಮ್ಮನ್ನು ಮೇಲಕ್ಕೆತ್ತುವನು.
ಯಾಕೋ 4.10-
ನೀನು ಹೋಗುವಲ್ಲೆಲ್ಲಾ ನಿನ್ನನ್ನು ಕಾಯುವುದಕ್ಕೆ ಆತನು ನಿನ್ನ ವಿಷಯವಾಗಿ ತನ್ನ ದೂತರಿಗೆ ಅಪ್ಪಣೆಕೊಡುವನು.
ಕೀರ್ತ 91.11-
ಆತನು ಒಂದೊಂದು ವಸ್ತುವನ್ನು ಸಮಯಕ್ಕೆ ತಕ್ಕ ಹಾಗೆ ಅಂದವಾಗಿ ನಿರ್ಮಿಸಿದ್ದಾನೆ.
ಪ್ರಸ 3.11-
ಒಬ್ಬನು, “ತಾನು ದೇವರನ್ನು ಪ್ರೀತಿಸುತ್ತೇನೆ” ಎಂದು ಹೇಳಿ ತನ್ನ ಸಹೋದರನನ್ನು ದ್ವೇಷಿಸಿದರೆ ಅವನು ಸುಳ್ಳುಗಾರನಾಗಿದ್ದಾನೆ. ಏಕೆಂದರೆ ತನ್ನೊಂದಿಗೆ ಇರುವ ಸಹೋದರನನ್ನು ಪ್ರೀತಿಸದವನು, ತಾನು ಕಾಣದಿರುವ ದೇವರನ್ನು ಹೇಗೆ ಪ್ರೀತಿಸಬಲ್ಲನು?
1 ಯೋಹಾ 4.20-
ಕರ್ತನಿಗೆ ಮೆಚ್ಚಿಕೆಯಾದದ್ದು ಏನೆಂಬುದನ್ನು ಪರಿಶೋಧಿಸಿ ತಿಳಿದುಕೊಳ್ಳಿರಿ.
ಎಫೆ 5.10-
ಸಮುದ್ರದಲ್ಲಿ ನೀರು ಹೇಗೋ ಹಾಗೆಯೇ ಭೂಮಿಯಲ್ಲಿ ಯೆಹೋವನ ಮಹಿಮೆಯ ಜ್ಞಾನವು ತುಂಬಿಕೊಂಡಿರುವುದು.’
(ಹಬ 2.14)-
ನೀವು ನಂಬಲಾಗದ ನೆರವೇರಿಕೆಯನ್ನು,ಸಂಪೂರ್ಣತೆಯನ್ನು ಕಾಣಬಹುದು, ಅದು ದೇವರಲ್ಲಿ,
ಜಗತ್ತಿನಲ್ಲಿ ಅಲ್ಲ. (ನೆನಪಿಡಿ)-