ಒಂದು ಅಕ್ಷರ ಕಲಿಸಿದರೂ ಅವರು ಗುರುವಾಗುತ್ತಾರೆ.
ಪ್ರತಿಯೊಬ್ಬರು ತಮ್ಮ ಸುತ್ತಮುತ್ತಲಿನವರಿಂದ
ಒಂದಿಲ್ಲೊಂದು ವಿಷಯ ಕಲಿತಿರುತ್ತೆವೆ.
ಹಾಗಾಗಿ ಇಲ್ಲಿ ಎಲ್ಲರೂ ಎಲ್ಲರಿಗೂ ಗುರುವಾಗುತ್ತಾರೆ.ನನ್ನ ಜೀವನದ ಪ್ರತಿಯೊಬ್ಬ ಗುರುವಿಗೂ ನನ್ನ ನಮನ.-
ಗುರು ಪೂರ್ಣಿಮೆ ಎನ್ನುವುದು ಗುರುಗಳ ಸ್ಮರಣೆಗೆ ಹಾಗೂ ಅವರ ಆಶೀರ್ವಾದ ಪಡೆಯಲು ಇರುವ ಒಂದು ಸುಸಂದರ್ಭ ಎನ್ನಬಹುದು. ಗುರುವಿನ ಆಶೀರ್ವಾದ ಅಥವಾ ಹಾರೈಕೆಯು ಇದ್ದರೆ ವ್ಯಕ್ತಿ ಜೀವನದಲ್ಲಿ ಅತ್ಯಂತ ಉತ್ತಮ ಸ್ಥಾನವನ್ನು ಪಡೆದುಕೊಳ್ಳುತ್ತಾನೆ ಎನ್ನಲಾಗುವುದು. ಗುರು ಎನ್ನುವ ಎರಡು ಪದಗಳೇ ಅತ್ಯುತ್ತಮ ಅರ್ಥವನ್ನು ನೀಡುತ್ತವೆ. ಗು ಮತ್ತು ರು ಎನ್ನುವ ಮೂಲ ಪದಗಳನ್ನು ಹೊಂದಿದೆ. ಸಂಸ್ಕೃತ ಭಾಷೆಯಲ್ಲಿ "ಗು" ಅಂದರೆ ಅಂಧಕಾರ ಅಥವಾ ಅಜ್ಞಾನ. "ರು" ಅಂದರೆ ಕಳೆಯುವ ಅಥವಾ ದೂರ ಮಾಡುವ ಎಂದರ್ಥ.
ಅದಕ್ಕೆ ಗುರು ಅಂದರೆ ಅಂಧಕಾರ ಅಥವಾ ಅಜ್ಞಾನವನ್ನು ದೂರ ಮಾಡುವವರು ಎಂದರ್ಥ. ಬಹುತೇಕ ಜನರು ಗುರುವನ್ನು ತಮ್ಮ ಜೀವನದ ಅವಿಭಾಜ್ಯ ಅಂಗವಾಗಿ ಪರಿಗಣಿಸುತ್ತಾರೆ. ನಮ್ಮ ಬುದ್ಧಿಯಲ್ಲಿ ಇದ್ದ ಕತ್ತಲು ಅಥವಾ ಅಜ್ಞಾನವನ್ನು ಓಡಿಸಿ, ಜ್ಞಾನ ಎನ್ನುವ ಬೆಳಕನ್ನು ನೀಡುವವನೇ ಗುರು. ಅಂತಹ ಗುರುವಿಗೆ ಗುಲಾಮನಾದರೆ ಸಾಕಷ್ಟು ವಿದ್ಯೆ ಮತ್ತು ಜ್ಞಾನ ದೊರೆಯುವುದು. ಜೀವನದಲ್ಲಿ ಉತ್ತಮ ಸ್ಥಾನವನ್ನು ಪಡೆದುಕೊಳ್ಳಲು ಸಾಧ್ಯವಾಗುವುದು ಎಂದು ಹೇಳಲಾಗುತ್ತದೆ.
ನಾಡಿನ ಸಮಸ್ತ ಜನತೆಗೆ ಗುರುಪೂರ್ಣಿಮೆಯ ಶುಭಾಶಯಗಳು...
-
ಅರಿವೇ ಗುರು
ಮನುಷ್ಯ ಜೀವನದಲ್ಲಿ
ಅರಿವು ಮೂಡಿಸಿ
ಅವನ ಜೀವನ ಪಯಣಕ್ಕೆ
ಬೆಳಕು ತೋರಿದ ಎಲ್ಲಾ ಗುರುಪರಂಪರೆಗಳಿಗೆ ಗುರುಪೂರ್ಣಿಮೆಯ ಶುಭಾಶಯಗಳು-