(ದಿನಕ್ಕೊಂದು ಭಗವದ್ಗೀತೆಯ ಅಧ್ಯಾಯದ ಸಾರಾಂಶ
ಹದಿನೆಂಟು ಅಧ್ಯಾಯ ಹದಿನೆಂಟು ದಿನದಲ್ಲಿ)
ಅಧ್ಯಾಯ 18: ಪರಮಾತ್ಮನೊಂದಿಗೆ ಐಕ್ಯ
ಫಲದ ಬಯಕೆಯಿಂದ ಮಾಡುವ ಕರ್ಮಗಳನ್ನು ಬಿಡುವುದು ಸಂನ್ಯಾಸ, ಆ ಎಲ್ಲಾ ಕರ್ಮಗಳನ್ನು ಮಾಡಿ ಫಲವನ್ನ ಬಯಸದೇ ಇರುವುದು ತ್ಯಾಗ ಎಂದು ಹೇಳುವ ಕೃಷ್ಣನು, ಕರ್ಮಯೋಗಿಯಾಗಿ ಬದುಕಬೇಕು. ನಿಮ್ಮ ಕೆಲಸವೇ ನಿಮ್ಮನ್ನು ಆತ್ಮದೊಂದಿಗೆ ಜೋಡಿಸುತ್ತದೆ. ಪರಮಾತ್ಮನೊಂದಿಗೆ ಐಕ್ಯವಾಗಲು ದಾರಿ ತೋರುತ್ತದೆ ಎಂದು ವಿವರಿಸುತ್ತಾನೆ.
|| ಸರ್ವೇ ಜನಾಃ ಸುಖಿನೋ ಭವಂತು ||
|| ಶ್ರೀ ಕೃಷ್ಣಾರ್ಪಣಮಸ್ತು ||-
(ದಿನಕ್ಕೊಂದು ಭಗವದ್ಗೀತೆಯ ಅಧ್ಯಾಯದ ಸಾರಾಂಶ
ಹದಿನೆಂಟು ಅಧ್ಯಾಯ ಹದಿನೆಂಟು ದಿನದಲ್ಲಿ)
ಅಧ್ಯಾಯ 16 : ಉತ್ತಮನಾಗಿರುವುದೇ ಶ್ರೇಷ್ಠ
ಸಿಟ್ಟು, ಕ್ರೂರತೆ, ಅಜ್ಞಾನ, ಅಪ್ರಾಮಾಣಿಕತೆ, ಅತಿಯಾಸೆ, ಅನೈತಿಕತೆ, ಅಹಂಕಾರ ಮುಂತಾದವು ವ್ಯಕ್ತಿಯನ್ನು ಆಧ್ಯಾತ್ಮಿಕವಾಗಿ ನಾಶ ಮಾಡುತ್ತವೆ. ಆದರೆ ಮಾನವೀಯತೆ, ಸತ್ಯ, ಅಹಿಂಸೆ, ತಾಳ್ಮೆ, ಇಂದ್ರಿಯಗಳ ನಿಯಂತ್ರಣ ಮುಂತಾದ ಸದ್ಗುಣಗಳು ಜ್ಞಾನಕ್ಕೆ ಕಾರಣವಾಗಿ ಸ್ವತಂತ್ರರನ್ನಾಗಿಸುತ್ತದೆ.-
ದಿನಕ್ಕೊಂದು ಭಗವದ್ಗೀತೆಯ ಅಧ್ಯಾಯದ ಸಾರಾಂಶ
ಹದಿನೆಂಟು ಅಧ್ಯಾಯ ಹದಿನೆಂಟು ದಿನ
ಅಧ್ಯಾಯ 2:
ಸರಿಯಾದ ಜ್ಞಾನವೇ ಎಲ್ಲ ಸಮಸ್ಯೆಗಳಿಗೆ ಅಂತಿಮ ಪರಿಹಾರ
ಕೃಷ್ಣನು ಅರ್ಜುನನಿಗೆ ಅವನೆಲ್ಲ ದುಃಖ ದುಮ್ಮಾನ, ಸಮಸ್ಯೆಗಳಿಗೆ ಅಜ್ಞಾನವೇ ಕಾರಣ ಎಂಬುದನ್ನು ತಿಳಿಸುತ್ತಾನೆ. ಯುದ್ಧದಲ್ಲಿ ಬಂಧು, ಗೆಳೆಯ ಬಳಗವೆಂದು ದೇಹವಷ್ಟೇ ಸಾಯುವುದು ಯಾರೊಬ್ಬರ ಆತ್ಮಗಳನ್ನೂ ನಾಶಪಡಿಸಲಾಗುವುದಿಲ್ಲ. ಹಾಗಾಗಿ ಅವರೆಲ್ಲ ಶಾಶ್ವತವಾಗಿರುತ್ತಾರೆ. ಯುದ್ಧವನ್ನು ದೂರವಿಡುವುದರಿಂದ ನಿನ್ನ ಧರ್ಮವನ್ನೇ ದೂರವಿಟ್ಟಂತೆ. ಅದು ಅಧರ್ಮ. ಹೋರಾಡದಿದ್ದರೆ ಆತನೊಬ್ಬ ಹೇಡಿ ಎನಿಸಿಕೊಳ್ಳುತ್ತಾನೆ ಎಂದು ಎಚ್ಚರಿಸುತ್ತಾನೆ ಕೃಷ್ಣ.-
( ದಿನಕ್ಕೊಂದು ಭಗವದ್ಗೀತೆಯ ಅಧ್ಯಾಯದ ಸಾರಾಂಶ
ಹದಿನೆಂಟು ಅಧ್ಯಾಯ ಹದಿನೆಂಟು ದಿನದಲ್ಲಿ )
ಅಧ್ಯಾಯ 7: ನೀನಾರು ಎಂದು ತಿಳಿದುಕೋ.
ಧ್ಯಾನ ಮಾಡುವುದರಿಂದ ನಿನಗೆ ನೀನು ಯಾರೆಂಬುದು ಅರಿವಾಗುವುದು. ಜ್ಞಾನ ಸಂಪಾದನೆ ಒಂದು ಜನ್ಮದ ಸಾಧನೆ ಅಲ್ಲ, ನೂರಾರು ಜನ್ಮಗಳ ಸಂಚಯನ. ಆದರೆ ಒಂದು ಜನ್ಮದಲ್ಲಿ ಮಾಡಿದ ಅಧ್ಯಾತ್ಮ ಸಾಧನೆ ಎಂದೂ ನಷ್ಟವಾಗುವುದಿಲ್ಲ. ಹುಟ್ಟುವಾಗಲೇ ನಾವು ನಮ್ಮ ಹಿಂದಿನ ಜನ್ಮದ ಅಧ್ಯಾತ್ಮ ಸಾಧನೆಯ ಜ್ಞಾನವನ್ನು ಹೊತ್ತು ಹುಟ್ಟುತ್ತೇವೆ. ಇದು ಮಾನವನಿಗೆ ಭಗವಂತನ ಮಹಾ ಪ್ರಸಾದ. ಹೀಗೆ ಅನೇಕ ಜನ್ಮಗಳ ಸಾಧನೆಯಿಂದ ಜ್ಞಾನ ಸಂಪಾದಿಸಿ, ಭಗವಂತನನ್ನು ತಿಳಿದು, ಭಗವಂತನಲ್ಲಿ ಶರಣಾಗುವ ಜ್ಞಾನಿ ಬಹಳ ಹಿರಿಯ. ಜಗತ್ತಿನಲ್ಲಿ ಇಂಥವರು ಬಹಳ ವಿರಳ ಎನ್ನುತ್ತಾನೆ ಕೃಷ್ಣ.-
ಭಗವದ್ಗೀತೆಯ ಹದಿನೆಂಟು ಅಧ್ಯಾಯ ಹದಿನೆಂಟು ದಿನದಲ್ಲಿ!
ದಿನಕ್ಕೊಂದು ಅಧ್ಯಾಯದ ಸಾರಾಂಶ
ಅಧ್ಯಾಯ 1: ತಪ್ಪಾಗಿ ಯೋಚಿಸುವುದೇ ಜೀವನದ ಸಮಸ್ಯೆ
ಅರ್ಜುನನ ದುಃಖ ಇಲ್ಲಿ ಮುಖ್ಯ ವಿಷಯ. ಯುದ್ಧಕ್ಕಾಗಿ ಬಂಧುಗಳನ್ನೇ ಕೊಲ್ಲಬೇಕಾದ ದುಗುಡ ಹಾಗೂ ಖಿನ್ನತೆ. ಧರ್ಮ ಹಾಳುಗೆಡವಿದ್ದನ್ನು ನೋಡುವುದಕ್ಕಿಂತ ಅವರೆಲ್ಲ ತನ್ನ ಬಂಧುಗಳೇ. ಅವರನ್ನು ಹೇಗೆ ಕೊಲ್ಲುವುದು ಎಂದು ಅರ್ಜುನ ಯೋಚಿಸುತ್ತಿರುತ್ತಾನೆ. ಆದರೆ, ಈ ಯೋಚನೆ ತಪ್ಪು. ಧರ್ಮವು ಈ ಭವಬಂಧನಗಳಿಗಿಂತ ಹೆಚ್ಚು. ತಪ್ಪಾಗಿ ಯೋಚಿಸುವುದರಿಂದ ತಪ್ಪಾದ ತೀರ್ಪು ಹೊರಬರುತ್ತದೆ ಎಂಬುದನ್ನು ಶ್ರೀಕೃಷ್ಣ ವಿವರಿಸುತ್ತಾನೆ. ಆದರೆ, ಅರ್ಜುನನಿಗೆ ಸಮಾಧಾನವಾಗುವುದಿಲ್ಲ. ಆತ ಗೊಂದಲ ಹಾಗೂ ದುಃಖದಿಂದ ಕುಳಿತುಕೊಳ್ಳುತ್ತಾನೆ.-
(ದಿನಕ್ಕೊಂದು ಭಗವದ್ಗೀತೆಯ ಅಧ್ಯಾಯದ ಸಾರಾಂಶ
ಹದಿನೆಂಟು ಅಧ್ಯಾಯ ಹದಿನೆಂಟು ದಿನದಲ್ಲಿ)
ಅಧ್ಯಾಯ 9:
ಯಾರು ತಮ್ಮ ಆತ್ಮವೆಂದು ನನ್ನನ್ನು ಧ್ಯಾನ ಮಾಡುತ್ತಾರೋ, ನಾನು ಅವರ ಯೋಗಕ್ಷೇಮ ಹೊರೆ ಹೊರುತ್ತೇನೆ ಎನ್ನುತ್ತಾನೆ ಕೃಷ್ಣ.
ಈ ಜಗತ್ತೆಲ್ಲಾ ಕಣ್ಣಿಗೆ ಕಾಣದ ನನ್ನಿಂದ ತುಂಬಿರುವುದು.
ಈ ಎಲ್ಲಾ ವಸ್ತುಗಳೂ ನನ್ನಲ್ಲಿ ಇರುವುವು, ಆದರೆ ನಾನು ಅವುಗಳಲ್ಲಿ ಇಲ್ಲ. ಜ್ಞಾನ ಎಂದರೆ ಭಗವಂತನ ಅರಿವು. ನಾವು ದೇವರನ್ನು ಪೂರ್ಣವಾಗಿ ಅರಿಯಲು ಸಾಧ್ಯವಿಲ್ಲ. ಆದರೆ ಪ್ರತಿಯೊಂದು ಜೀವಕ್ಕೂ ತನ್ನದೇ
ಆದ ವಿಶಿಷ್ಟವಾದಂತಹ ಅರಿವಿನ ಮಟ್ಟವಿದೆ.
ಎಲ್ಲರೂ ಒಂದೇ ರೀತಿ ತಿಳಿದುಕೊಳ್ಳಲು ಬರುವುದಿಲ್ಲ. ಅವರವರ ಮಟ್ಟಕ್ಕೆ ತಕ್ಕಂತೆ ಭಗವಂತನನ್ನು ಅರಿಯುವುದು ವಿಜ್ಞಾನ.-
(ದಿನಕ್ಕೊಂದು ಭಗವದ್ಗೀತೆಯ ಅಧ್ಯಾಯದ ಸಾರಾಂಶ
ಹದಿನೆಂಟು ಅಧ್ಯಾಯ ಹದಿನೆಂಟು ದಿನದಲ್ಲಿ)
ಅಧ್ಯಾಯ 8: ಪ್ರಯತ್ನ ಬಿಡಬೇಡ, ದೇವರ ಧ್ಯಾನದಲ್ಲಿ ಪ್ರಾಮಾಣಿಕವಾಗಿ ತೊಡಗಿರುವವನಿಗೆ ದೇವರು ಸಿಕ್ಕೇ ಸಿಗುತ್ತಾನೆ.
ಅನನ್ಯ ಚೇತಾಃ ಸತತಮ್ ಯಃ ಮಾಮ್ ಸ್ಮರತಿ ನಿತ್ಯಶಃ ।
ತಸ್ಯ ಅಹಮ್ ಸುಲಭಃ ಪಾರ್ಥ ನಿತ್ಯ ಯುಕ್ತಸ್ಯ ಯೋಗಿನಃ |
“ನಿರಂತರ ನಿತ್ಯ ಭಗವಂತನ ಚಿಂತನೆ ಮಾಡುತ್ತಾ ಬೇರೇನನ್ನೂ ನೆನೆಯದೆ ನನ್ನನ್ನು ಭಜಿಸುವ ಸಾಧಕನಿಗೆ ನಾನು ಅನಾಯಾಸವಾಗಿ ಸ್ವಾಧೀನನಾಗುತ್ತೇನೆ ” ಎನ್ನುತ್ತಾನೆ ಕೃಷ್ಣ . ಸಾಧನೆಯಲ್ಲಿ ನಿತ್ಯ ತೊಡಗಿ, ಸಾಧನೆಯ ತುದಿ ಮುಟ್ಟಿದವ ಬೇರೆ ಯಾವ ಪ್ರಯತ್ನವೂ ಇಲ್ಲದೆ ಭಗವಂತನನ್ನು ಸೇರುತ್ತಾನೆ.-
(ದಿನಕ್ಕೊಂದು ಭಗವದ್ಗೀತೆಯ ಅಧ್ಯಾಯದ ಸಾರಾಂಶ
ಹದಿನೆಂಟು ಅಧ್ಯಾಯ ಹದಿನೆಂಟು ದಿನದಲ್ಲಿ)
ಅಧ್ಯಾಯ 11: ವಿಶ್ವರೂಪ ದರ್ಶನ.
ಈಶ್ವರತ್ವದ ರೂಪವನ್ನು ನೋಡುವ ಆಸೆಯನ್ನು ಅರ್ಜುನ ವ್ಯಕ್ತಪಡಿಸುತ್ತಾನೆ. ಇದರಿಂದ ಕೃಷ್ಣನು ತನ್ನ ಆದಿ ಅಂತ್ಯವಿಲ್ಲದ ಪ್ರಕಾಶಮಾನವಾದ ವಿಶ್ವರೂಪ ದರ್ಶನ ಮಾಡಿಸುತ್ತಾನೆ. ಇದನ್ನು ನೋಡಿ ಅರ್ಜುನ ಬೆರಗಾಗಿ ಶರಣಾಗುತ್ತಾನೆ. ಸತ್ಯವನ್ನು ಅರಿಯದಿದ್ದುದಕ್ಕೆ ಕ್ಷಮೆ ಯಾಚಿಸುತ್ತಾನೆ.-
(ದಿನಕ್ಕೊಂದು ಭಗವದ್ಗೀತೆಯ ಅಧ್ಯಾಯದ ಸಾರಾಂಶ
ಹದಿನೆಂಟು ಅಧ್ಯಾಯ ಹದಿನೆಂಟು ದಿನದಲ್ಲಿ)
ಅಧ್ಯಾಯ 10: ಕರ್ಮಕ್ಕೆ ತಕ್ಕ ಫಲ ಪ್ರಾಪ್ತಿ.
ಭೂಮಿಯ ಪ್ರತಿಯೊಂದು ಚರಾಚರಗಳಲ್ಲೂ ನಾನಿದ್ದೇನೆ. ನಿನ್ನ ಸುತ್ತಲ ಬದುಕು ಸಂಪೂರ್ಣ ಪವಾಡಗಳಿಂದಲೇ ತುಂಬಿದೆ. ಅವುಗಳನ್ನು ಕಂಡು ಖುಷಿಪಡು. ಜಗತ್ತಿನಲ್ಲಿ ದೇವರಿರುವುದಲ್ಲ, ದೇವರೊಳಗೆ ಸಂಪೂರ್ಣ ಜಗತ್ತಿದೆ. ನಿನ್ನ ಕರ್ಮಕ್ಕೆ ತಕ್ಕ ಫಲವನ್ನು ನಾನು ನೀಡಿಯೇ ತೀರುತ್ತೇನೆ.-
(ದಿನಕ್ಕೊಂದು ಭಗವದ್ಗೀತೆಯ ಅಧ್ಯಾಯದ ಸಾರಾಂಶ
ಹದಿನೆಂಟು ಅಧ್ಯಾಯ ಹದಿನೆಂಟು ದಿನದಲ್ಲಿ)
ಅಧ್ಯಾಯ 12: ವೈರಾಗ್ಯದಿಂದ ಧ್ಯಾನಿಸುವವರೇ ಯೋಗಿ.
ಯಾರು ಭಗವಂತನಲ್ಲಿ ಹೆಚ್ಚು ಪ್ರೀತಿಯನ್ನಿಟ್ಟು ವಿಶ್ವರೂಪವನ್ನು ಧ್ಯಾನಿಸುತ್ತಾ ಉಪಾಸನೆ ಮಾಡುವರೋ ಅವರು ಹೆಚ್ಚಿನ ಯೋಗಿಗಳು. ವಿವೇಕ ವೈರಾಗ್ಯಗಳಿಂದ ಅದನ್ನು ಅಭ್ಯಾಸ ಮಾಡಬೇಕು. ಅದು ಕಷ್ಟವಾದರೆ, ಭಗವಂತನ ಪ್ರೀತ್ಯರ್ಥವಾಗಿ ಕರ್ಮಗಳನ್ನು ಮಾಡು. ಅದೂ ಕಷ್ಟವಾದರೆ. ಕರ್ಮಗಳ ಫಲಗಳ ಬಯಕೆಗಳನ್ನೆಲ್ಲಾ ಬಿಡು ಎನ್ನುತ್ತಾನೆ.-