ಕಾಲಾಯ ತಸ್ಮೈ ನಮಃ, ಕಾಲವೇ ಎಲ್ಲವನ್ನೂ ಕಲಿಸುತ್ತದೆ, ಮರೆಸುತ್ತದೆ ಎಂದು ಧೈರ್ಯಮಾಡಿ ಮುಂದೆ ಸಾಗುತ್ತೇವೆ. ಅದು ನಿಜವೇ. ಕಾಲ ಜೀವನದ ಪಾಠ ಕಲಿಸುತ್ತದೆ, ಆದರೆ ಮನಸ್ಸಿನೊಳಗೆ ಅಡಗಿರುವ ನೋವು ಕಾಲದ ಜೊತೆ ಸಹ ಸಾಯುವುದಿಲ್ಲ, ಅದು ಸಾಯವುದು ನಾವು ಸತ್ತಾಗಲೇ. ನಾವು ನೋವನ್ನು ಎಷ್ಟೇ ಮರೆತಿದ್ದೇವೆಂದು ಸುಮ್ಮನಿದ್ದರೂ ಒಂದಲ್ಲಾ ಒಂದು ದಿನ ಸಡನ್ನಾಗಿ ಮನಸ್ಸಿನೊಳಗೆ ತೊಳಲಾಟವನ್ನುಂಟು ಮಾಡುತ್ತದೆ. ಇಷ್ಟು ಹಿಂಸೆ ಕೊಡುವ ನೋವುಗಳಿಗೆ ಉತ್ತರವೇ ಇಲ್ಲವೇ ಅಂತ ಯೋಚಿಸಿದರೆ ಕೆಲವು ನೋವುಗಳಿಗೆ ಉತ್ತರ ಸಿಗುವುದು ಕಷ್ಟವೇ.

- ✍️꧁ಅನು💚ಪುನಿ꧂